AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

War of words goes unabated: ಕೆಎಂ ಶಿವಲಿಂಗೇಗೌಡರ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಹೆಚ್ ಡಿ ರೇವಣ್ಣ

War of words goes unabated: ಕೆಎಂ ಶಿವಲಿಂಗೇಗೌಡರ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಹೆಚ್ ಡಿ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 20, 2023 | 11:18 AM

Share

ಗಮನಿಸಬೇಕಿರುವ ಸಂಗತಿಯೇನೆಂದರೆ ಶಿವಲಿಂಗೇಗೌಡರು ತನ್ನ ವಿರುದ್ಧ, ರೇವಣ್ಣ ಮತ್ತು ಹೆಚ್ ಡಿ ಕುಮಾರಸ್ವಾಮಿ ಮಾಡುವ ಕಾಮೆಂಟ್ ಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ.

ಹಾಸನ: ಅರಸೀಕೆರೆಯ ಜೆಡಿಎಸ್ ಶಾಸಕ ಕೆ ಎಮ್ ಶಿವಲಿಂಗೇಗೌಡ (KM Shivalinge Gowda) ಕಾಂಗ್ರೆಸ್ ಪಕ್ಷದೊಳಗೆ ಕಾಲಿಟ್ಟಿರುವುದು ನಿಜವಾದರೂ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಏತನ್ಮಧ್ಯೆ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna), ಶಿವಲಿಂಗೇಗೌಡರ ಮೇಲೆ ವಾಗ್ದಾಳಿ ನಡೆಸುವುದನ್ನು ಮುಂದುವರಿಸಿದ್ದಾರೆ. ಹಾಸನದಲ್ಲಿಂದು ಗೌಡರ ವಿರುದ್ಧ ಏಕವಚನದಲ್ಲಿ ಮಾತಾಡಿರುವ ರೇವಣ್ಣ ಆಡಿಯೋದಲ್ಲಿ ಮಾತಾಡಿದ್ದು ತಾನಲ್ಲ ಎಂದು ಧರ್ಮಸ್ಥಳ ಮಂಜುನಾಥನ ಮುಂದೆ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಗಮನಿಸಬೇಕಿರುವ ಸಂಗತಿಯೇನೆಂದರೆ ಶಿವಲಿಂಗೇಗೌಡರು, ರೇವಣ್ಣ ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಾಡುವ ಕಾಮೆಂಟ್ ಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ