Hassan: ಪತ್ನಿ ಭವಾನಿ ಪರ ಪ್ರಚಾರ ಮಾಡುವಾಗ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಹೆಚ್ ಡಿ ರೇವಣ್ಣ
ಇದುವರೆಗೆ ಸಿದ್ದರಾಮಯ್ಯ ವಿರುದ್ಧ ಮಾತಾಡದ ಬಿಜೆಪಿ ನಾಯಕರು ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಅವರ ವಿರುದ್ಧ ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ ಎಂದು ರೇವಣ್ಣ ಹೇಳಿದರು.
ಹಾಸನ: ಕ್ಷೇತ್ರದಲ್ಲಿ ತಮ್ಮ ಪತ್ನಿ ಭವಾನಿ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಹೊಳೆನರಸೀಪುರದ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಅವರು ಬೈಲಹಳ್ಳಿ ಗ್ರಾಮದ ದೇಗುಲದ ಬಳಿ ಸಾರ್ವಜನಿಕ ಸಭೆ (public meeting) ಉದ್ದೇಶಿಸಿ ಮಾತಾಡುವಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ವಹಿಸಿಕೊಂಡು ಮಾತಾಡಿದರು. ಅಸಲಿಗೆ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸಿದ್ದರಾಮಯ್ಯರನ್ನು ಸಮರ್ಥಿಸಿಕೊಂಡರು. ಇದುವರೆಗೆ ಸಿದ್ದರಾಮಯ್ಯ ವಿರುದ್ಧ ಮಾತಾಡದ ಬಿಜೆಪಿ ನಾಯಕರು ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಅವರ ವಿರುದ್ಧ ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ. ತನಿಖೆ ಮಾಡಿಸಿ ಅಂತ ಸಿದ್ದರಾಮಯ್ಯ ಸವಾಲೆಸೆದರೂ ಬಿಜೆಪಿ ನಾಯಕರು ಯಾಕೆ ಹೆದರುತ್ತಿದ್ದಾರೆ ಎಂದು ರೇವಣ್ಣ ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ