ನರಗುಂದ ಬಳಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು; ಡಿಕ್ಕಿಯ ನಂತರ ಹೊತ್ತಿಯುರಿದ ವಾಹನಗಳು!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 23, 2022 | 4:54 PM

ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಕಾರು ಮತ್ತು ಬೈಕ್ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ನರಗುಂದ ಪೊಲೀಸ್ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಮೃತರನ್ನು ಗುರುತಿಸುವ ಪ್ರಯತ್ನದಲ್ಲಿದ್ದಾರೆ.

ಗದಗ: ಜಿಲ್ಲೆಯ ನರಗುಂದ (Nargund) ತಾಲ್ಲೂಕಿನ ಭೈರನಹಟ್ಟಿ ಬಳಿ ಬುಧವಾರ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ (head on) ಢಿಕ್ಕಿಯಾದ ಬಳಿಕ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿವೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳ (fire brigade) ಸಿಬ್ಬಂದಿ ಆಗಮಿಸುವಷ್ಟರಲ್ಲಿ ಕಾರು ಮತ್ತು ಬೈಕ್ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ನರಗುಂದ ಪೊಲೀಸ್ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಮೃತರನ್ನು ಗುರುತಿಸುವ ಪ್ರಯತ್ನದಲ್ಲಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು  ಇಲ್ಲಿ ಕ್ಲಿಕ್ ಮಾಡಿ