AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ

ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ

ಭಾವನಾ ಹೆಗಡೆ
|

Updated on: Aug 24, 2026 | 2:23 PM

Share

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸರಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧಿ ಸರಬರಾಜಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸರಬರಾಜಾಗಿರುವುದು ಪತ್ತೆಯಾದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕೃತಕ ಪನ್ನೀರ್ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಈ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಆಗಸ್ಟ್ 24: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಯಾವುದೇ ನಕಲಿ ಔಷಧಿಗಳನ್ನು ಸರಬರಾಜು ಮಾಡಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸರ್ಕಾರಿಆಸ್ಪತ್ರೆಗಳಿಗೆ ನಕಲಿ ಔಷಧಿ ಸರಬರಾಜಾಗಿರುವುದು ಪತ್ತೆಯಾದರೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಇದೇ ವೇಳೆ, ಕೃತಕ ಪನ್ನೀರ್ (ಚೀಸ್) ಮಾರಾಟ ಮತ್ತು ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಯು.ಟಿ. ಖಾದರ್ ತಿಳಿಸಿದ್ದಾರೆ. ಕೃತಕ ಉತ್ಪನ್ನಗಳು ಕೇವಲ ಪನ್ನೀರ್‌ಗೆ ಸೀಮಿತವಲ್ಲ, ಎಲ್ಲಾ ಕೃತಕ ಉತ್ಪನ್ನಗಳಿಗೂ ನಿಷೇಧ ಅನ್ವಯಿಸುತ್ತದೆ ಎಂದು ಸಚಿವರು ಪುನರುಚ್ಚರಿಸಿದ್ದಾರೆ. ಸದ್ಯಕ್ಕೆ ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ನಿಷೇಧಿಸುವ ಅಧಿಕಾರವಿದೆ. ಇದರ ನಂತರ ನವೀಕರಣ ಅಥವಾ ಕೇಂದ್ರ ಸರ್ಕಾರದ ಮೂಲಕ ನಿಯಮ ರೂಪಿಸಬೇಕಾದ ಅಗತ್ಯವಿದೆ ಎಂದು ಅವರು ವಿವರಿಸಿದ್ದಾರೆ.

ನಕಲಿ ಔಷಧಿ ಜಾಲದ ಬಗ್ಗೆ ಎಸ್‌ಐಟಿ (ವಿಶೇಷ ತನಿಖಾ ತಂಡ) ಈಗಾಗಲೇ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸುತ್ತಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಲು ನಿರಂತರವಾಗಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us