ಪಂಚತಾರಾ ಹೋಟೆಲ್ ಸ್ಥಿತಿ ಬಯಲು ಮಾಡಿದ್ದೇವೆ: ತಿನ್ನೋದು ಬಿಡೋದು ಜನರಿಗೆ ಬಿಟ್ಟಿದ್ದು ಎಂದ ಸಚಿವ

Updated on: Aug 08, 2026 | 3:01 PM

ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಆಕ್ರೋಶಗೊಂಡಿದ್ದಾರೆ. ಸ್ಟಾರ್ ಹೋಟೆಲ್​​​​ಗಳಿ ಸ್ಥಿತಿಯನ್ನು ಜನರಿಗೆ ತಿಳಿಸಿಕೊಟ್ಟಿದ್ದೇವೆ. ಇನ್ನು ತಿನ್ನೋದು ಬಿಡೋದು ಜನರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ಬೆಂಗಳೂರು, (ಆಗಸ್ಟ್ 08): ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್​​​​​​​ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಆಕ್ರೋಶಗೊಂಡಿದ್ದಾರೆ. ಸ್ಟಾರ್ ಹೋಟೆಲ್​​​​ಗಳಿ ಸ್ಥಿತಿಯನ್ನು ಜನರಿಗೆ ತಿಳಿಸಿಕೊಟ್ಟಿದ್ದೇವೆ. ಇನ್ನು ತಿನ್ನೋದು ಬಿಡೋದು ಜನರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More