ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ನಾಲ್ವರು ಮೃತಪಟ್ಟಿದ್ದು, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು, ತಜ್ಞರಿಂದ ಮಾಹಿತಿ ಪಡೆದು, ಹೃದಯಾಘಾತ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವೆ ಎಂದಿದ್ದಾರೆ. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.
ಮೈಸೂರು, ಜೂನ್ 30: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೃದಯಾಘಾತ ಹೆಚ್ಚಳಕ್ಕೆ ಕಾರಣ ಏನೆಂದು ಮಾಹಿತಿ ಪಡೆಯುತ್ತೇನೆ. ತಜ್ಞರ ಮೂಲಕ ಮಾಹಿತಿ ಪಡೆದುಕೊಂಡು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಸಿದ್ದರಾಮಯ್ಯನವರ ಮಾತಿನ ವಿವರಗಳಿಗೆ ವಿಡಿಯೋ ನೋಡಿ.
ಇದನ್ನೂ ಓದಿ: ಹಾಸನ: ಹೃದಯಾಘಾತಕ್ಕೆ ಒಂದೇ ದಿನ ನಾಲ್ಕು ಬಲಿ, 40 ದಿನಗಳಲ್ಲಿ 22 ಸಾವು
Latest Videos