AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ! ಮನಕಲಕುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಚಿಕ್ಕಮಗಳೂರು: ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ! ಮನಕಲಕುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 04, 2026 | 2:54 PM

Share

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ಬಳಿ ಕರುವನ್ನು ಗೋಕಳ್ಳರು ಬಲವಂತವಾಗಿ ಎಳೆದೊಯ್ಯುವಾಗ ತಾಯಿ ಹಸು ಅವರ ಹಿಂದೆ ಓಡಿದ ಮನಕಲಕುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರ ಬಳಿ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗೋಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಹಾಗೂ ಸಾರ್ವಜನಿಕರು ಮೂಡಿಗೆರೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು, ಅಕ್ಟೋಬರ್04: ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 173ರ ಬಳಿ ಕರುವನ್ನು ಕತ್ತಿಗೆ ಹಗ್ಗ ಹಾಕಿ ಗೋಕಳ್ಳರು ಧರಧರನೆ ಎಳೆದೊಯ್ಯುತ್ತಿದ್ದಾಗ, ತಾಯಿ ಹಸು ಅವರ ಹಿಂದೆ ಓಡಿದ ಮನಕಲಕುವ ಘಟನೆ ನಡೆದಿದೆ.

ಈ ದೃಶ್ಯಾವಳಿಗಳು ಸಿಸಿಟಿವಿ ಕೆಮೆರಾದಲ್ಲಿ ಸಸ್ಪಷ್ಟವಾಗಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಗೋಕಳ್ಳರ ಹಾವಳಿ ತೀವ್ರವಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕಳ್ಳರನ್ನು ತಕ್ಷಣವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಗಳು ಹಾಗೂ ಗ್ರಾಮಸ್ಥರು ಮೂಡಿಗೆರೆ ಪೋಲಿಸರನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 04, 2026 02:47 PM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More