ನಿವೃತ್ತರಾದ ದೈಹಿಕ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!

Edited By:

Updated on: Jun 29, 2026 | 2:27 PM

ಶಿಕ್ಷಣ ನೀಡಿ ಭವಿಷ್ಯ ರೂಪಿಸಿದ ತಮ್ಮ ನೆಚ್ಚಿನ ಗುರುವಿಗೆ ಹಳೆಯ ವಿದ್ಯಾರ್ಥಿಗಳು ಅಪೂರ್ವ 'ಗುರು ಕಾಣಿಕೆ' ನೀಡಿದ ಹೃದಯಸ್ಪರ್ಶಿ ಘಟನೆ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಜೆ.ಎಂ. ನದಾಫ್ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕರ ನಿವೃತ್ತಿ ಸನ್ಮಾನದ ನೆನಪಿಗಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ, ಪ್ರೀತಿಯಿಂದ ಹೊಸ ಬೈಕ್ ಒಂದನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಗುರುಭಕ್ತಿಯನ್ನು ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಅಪೂರ್ವ ಕೊಡುಗೆಗೆ ಶಿಕ್ಷಕರು ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಕೊಪ್ಪಳ, ಜೂನ್ 29: ಶಿಕ್ಷಣ ನೀಡಿ ಭವಿಷ್ಯ ರೂಪಿಸಿದ ತಮ್ಮ ನೆಚ್ಚಿನ ಗುರುವಿಗೆ ಹಳೆಯ ವಿದ್ಯಾರ್ಥಿಗಳು ಅಪೂರ್ವ ‘ಗುರು ಕಾಣಿಕೆ’ ನೀಡಿದ ಹೃದಯಸ್ಪರ್ಶಿ ಘಟನೆ ತಾಲೂಕಿನ ಮಸಬಹಂಚಿನಾಳದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಜೆ.ಎಂ. ನದಾಫ್ ಅವರು ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕರ ನಿವೃತ್ತಿ ಸನ್ಮಾನದ ನೆನಪಿಗಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ, ಪ್ರೀತಿಯಿಂದ ಹೊಸ ಬೈಕ್ ಒಂದನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಗುರುಭಕ್ತಿಯನ್ನು ತೋರಿಸಿದ್ದಾರೆ. ವಿದ್ಯಾರ್ಥಿಗಳ ಈ ಅಪೂರ್ವ ಕೊಡುಗೆಗೆ ಶಿಕ್ಷಕರು ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More