ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ: ಕಾರಣ ಇಲ್ಲಿದೆ

Edited By:

Updated on: Sep 08, 2026 | 5:20 PM

ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ ತಡವಾಗಿ ಬಂದ ಶಾಸಕ ಸಿದ್ದು ಪಾಟೀಲ್‌ಗೆ ಸಮಯ ಪಾಲನೆ ಮಾಡುವಂತೆ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಸಲಹೆ ನೀಡಿದ್ದಾರೆ. ಇದೇ ವಿಚಾರಕ್ಕೆ ಉಭಯ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳನ್ನು ನಾಯಕರು ಮಾಡಿದ್ದಾರೆ.

ಬೀದರ್​, ಸೆಪ್ಟೆಂಬರ್​​ 08: ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ ವಿಧಾನ ಪರಿಷತ್​​ ಸದಸ್ಯ ಮತ್ತು ಶಾಸಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ. ಕೆಕೆಆರ್​ಡಿಬಿ ಮೈಕ್ರೋ ಯೋಜನೆ ಅಡಿ ರಸ್ತೆ ಕಾಮಗಾರಿ ಗುದ್ದಲಿ ‌ಪೂಜೆಗೆ ಶಾಸಕ ಸಿದ್ದು ಪಾಟೀಲ್​​ ತಡವಾಗಿ ಬಂದಿದ್ದು, ಎಂಎಲ್​ಸಿ ಚಂದ್ರಶೇಖರ್ ಪಾಟೀಲ್ ಶಾಸಕರಿಗಾಗಿ ಕಾದು ಕುಳಿತಿದ್ದರು. ಕಾರ್ಯಕ್ರಮಕ್ಕೆ ಬಂದ ಶಾಸಕರ ಬಳಿ ಸಮಯ ಪಾಲನೆ ಮಾಡಿ ಎಂದು ಚಂದ್ರಶೇಖರ್ ಹೇಳಿದ ಕಾರಣ ಉಭಯ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 08, 2026 05:19 PM
Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More