ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ
ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆಯಿತು. ವೈಯಕ್ತಿಕ ಆರೋಪಗಳು, ಎಫ್‌ಐಆರ್ ಮತ್ತು ಅಧಿಕಾರದ ದುರುಪಯೋಗದ ಬಗ್ಗೆ ಪ್ರಸ್ತಾಪಿಸಿದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭಾಧ್ಯಕ್ಷರು ಸದಸ್ಯರನ್ನು ಸಮಾಧಾನಪಡಿಸಲು ಪದೇ ಪದೇ ಮಧ್ಯಪ್ರವೇಶಿಸಬೇಕಾಯಿತು.
ಬೆಂಗಳೂರು, ಮಾರ್ಚ್ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 26, 2026 01:55 PM
Follow Us
