Kalaburagi Rain: ಕಲಬುರಗಿಯಲ್ಲಿ ಸುರಿಯಿತು ರಾಶಿ ರಾಶಿ ಆಲಿಕಲ್ಲು, ಭಾರೀ ಮಳೆ

Updated on: Apr 27, 2023 | 7:35 PM

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕಲಬುರಗಿ ಜಿಲ್ಲೆಯ ಜನರಿಗೆ ಗುರುವಾರ ವರುಣನ ಕೃಪೆಯಾಯಿತು. ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ.

ಕಲಬುರಗಿ: ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕಲಬುರಗಿ ಜಿಲ್ಲೆಯ ಜನರಿಗೆ ಗುರುವಾರ ವರುಣನ ಕೃಪೆಯಾಯಿತು. ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಚಿಂಚೋಳಿ ತಾಲೂಕಿನಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು, ರಸ್ತೆ ಬದಿ ಪ್ಯಾಪಾರಿಗಳ ಪರದಾಟ ಕಂಡುಬಂದಿದೆ. ಕಲಬುರಗಿ ನಗರದ ಕೋರ್ಟ್ ರಸ್ತೆ, ಜಗತ್ ಮಾರ್ಗ, ಲಾಲಗೇರಿ ಕ್ರಾಸ್ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಬಿರುಬೇಸಿಗೆಯಲ್ಲಿ ಆಲಿಕಲ್ಲು ಮಳೆಯಿಂದ ಜನರು ಸಂತಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More