ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ

Updated on: Apr 29, 2026 | 6:46 PM

ಬೆಂಗಳೂರಿನ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಿಂದ ನಗರದಲ್ಲಿ ಅವಾಂತರ ಸೃಷ್ಟಿಯಾಗಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ ಸೇರಿದಂತೆ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಮಿಷನರ್ ಕಚೇರಿ ಆವರಣದಲ್ಲಿ ನದಿಯಂತಹ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ ಹಾನಿಯಾಗಿದೆ. ಆವರಣದಲ್ಲಿ ನೀರು ತುಂಬಿ ಹೊಳೆಯಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿ ದ್ವಿಚಕ್ರ ವಾಹನ ಸವಾರರ ಸಂಚಾರ ಅಸ್ತವ್ಯಸ್ತಗೊಂಡಿದೆ. ಕ್ರೆಸೆಂಟ್ ರಸ್ತೆ ಮತ್ತು ಶಿವಾನಂದ ಸರ್ಕಲ್‌ನಲ್ಲೂ ಮರಗಳು ಬಿದ್ದಿರುವ ಘಟನೆಗಳು ವರದಿಯಾಗಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More