Chikkamagalur Rains: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ

Updated on: May 25, 2023 | 4:56 PM

ಮುಖ್ಯಾಂಶಗಳು

  • ಭಾರಿ ಮಳೆಗೆ ಅವಾಂತರ ಸೃಷ್ಟಿ, ಲಕ್ಷಾಂತರ ಮೌಲ್ಯದ ಬೆಳೆ ನಾಶ
  • ಮುಳ್ಳಯ್ಯನಗಿರಿ ,ದತ್ತಪೀಠದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ
  • ಮಳೆ‌ ಆರ್ಭಟಕ್ಕೆ ನೂರಾರು ಪ್ರವಾಸಿಗರ ಪರದಾಟ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ. ಪರಿಣಾಮವಾಗಿ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ. ಮಳೆ‌ ಆರ್ಭಟಕ್ಕೆ ನೂರಾರು ಪ್ರವಾಸಿಗರು (Tourists) ಪರದಾಡುವಂತಾಗಿದೆ. ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠದಲ್ಲಿ ಕೂಡ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಸಖರಾಯಪಟ್ಟಣ ಸಮೀಪದ ಲಕ್ಕಮ್ಮನಹಳ್ಳಿಯಲ್ಲಿ ಧಾರಾಕಾರ ಮಳೆಗೆ ಅಡಿಕೆ ತೋಟಗಳು ಜಲಾವೃತಗೊಂಡಿದ್ದು, ಬೆಳೆ ಕೊಚ್ಚಿ ಹೋಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 25, 2023 04:53 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More