ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದವಸ ಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದ್ದು, ಪರಿಹಾರಕ್ಕಾಗಿ ಗ್ರಾಮಸ್ಥರು ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.
ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು ಹಾಸಿಗೆಗಳು ಮಳೆಗೆ ನೆನೆದು ಹಾನಿಯಾಗಿದ್ದು, ಮನೆ ಮೇಲೆ ಅಳವಡಿಸಿದ್ದ ಸೋಲಾರ್ ಪ್ಯಾನಲ್‍ಗಳು ಕೂಡ ಧರೆಗುರುಳಿವೆ. ಇದಲ್ಲದೆ, ದನದ ಕೊಟ್ಟಿಗೆಗಳು ನೆಲಸಮವಾಗಿದ್ದು, ವಿದ್ಯುತ್ ಕಂಬಗಳು ಮತ್ತು ತೆಂಗಿನ ಮರಗಳು ಉರುಳಿ ಬಿದ್ದ ಪರಿಣಾಮ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ತಮಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
