ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು; ಜುಲೈ 4ರವರೆಗೆ ಭಾರೀ ಮಳೆಯ ಎಚ್ಚರಿಕೆ
ಜುಲೈ 1ರಿಂದ ಜುಲೈ 4 ರವರೆಗಿನ ಅವಧಿಯಲ್ಲಿ ಮಳೆಯ ಮುನ್ನೆಚ್ಚರಿಕೆಯ ತೀವ್ರತೆಯನ್ನು ಹೆಚ್ಚಿಸಲಾಗಿದ್ದು, ಮುಂಬೈನ ಕೆಲವು ಪ್ರದೇಶಗಳಲ್ಲಿ 'ಭಾರಿಯಿಂದ ಅತಿ ಭಾರಿ' ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಹವಾಮಾನ ಇಲಾಖೆಯು ಈ ಅವಧಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ಜುಲೈ 3ರಂದು ಅತ್ಯಂತ ತೀವ್ರವಾದ ಮಳೆಯಾಗುವ ಮುನ್ಸೂಚನೆಯಿದೆ ಎಂದು ಐಎಂಡಿ ತಿಳಿಸಿದೆ.
ಮುಂಬೈ, ಜೂನ್ 30: ನೈಋತ್ಯ ಮುಂಗಾರು ಈಗ ಇಡೀ ಮಹಾರಾಷ್ಟ್ರ ರಾಜ್ಯವನ್ನು ಆವರಿಸಿಕೊಂಡಿದ್ದು, ಮುಂಬರುವ ದಿನಗಳಲ್ಲಿ ತೀವ್ರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯಾದ್ಯಂತ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆಯಿಂದಾಗಿ ಮುಂಬೈನ (Mumbai Rains) ರಸ್ತೆಗಳಲ್ಲಿ ಮಳೆನೀರು ತುಂಬಿದ್ದು, ಕೆರೆಯಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಪರದಾಡುವಂತಾಗಿದೆ.
ಸಾಮಾನ್ಯವಾಗಿ ಜೂನ್ 11ರ ಸುಮಾರಿಗೆ ಮುಂಬೈ ಪ್ರವೇಶಿಸಬೇಕಿದ್ದ ಮುಂಗಾರು, ಈ ವರ್ಷ ಒಂದು ವಾರಕ್ಕೂ ಹೆಚ್ಚು ತಡವಾಗಿ ಆಗಮಿಸಿದ್ದರಿಂದ ಮುಂಬೈ ಜನತೆ ದೀರ್ಘಕಾಲ ಕಾಯಬೇಕಾಯಿತು. ಮುಂಬರುವ ದಿನಗಳಲ್ಲಿ ವ್ಯಾಪಕ ಮತ್ತು ಅತ್ಯಂತ ತೀವ್ರವಾದ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಜುಲೈ 1ರಿಂದ ಜುಲೈ 4 ರವರೆಗಿನ ಅವಧಿಯಲ್ಲಿ ಮಳೆಯ ಮುನ್ನೆಚ್ಚರಿಕೆಯ ತೀವ್ರತೆಯನ್ನು ಹೆಚ್ಚಿಸಲಾಗಿದ್ದು, ಮುಂಬೈನ ಕೆಲವು ಪ್ರದೇಶಗಳಲ್ಲಿ ‘ಅತಿ ಭಾರಿ’ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಹವಾಮಾನ ಇಲಾಖೆಯು ಈ ಅವಧಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಅದರಲ್ಲೂ ಜುಲೈ 3ರಂದು ಅತ್ಯಂತ ತೀವ್ರವಾದ ಮಳೆಯಾಗುವ ಮುನ್ಸೂಚನೆಯಿದೆ ಎಂದು ಐಎಂಡಿ ತಿಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

