ಭಾರಿ ಮಳೆ: ವಾವ್​! ಕಣ್ಮನ ಸೆಳೆಯುತ್ತಿದೆ ಹೊಗೇನಕಲ್ ಜಲಪಾತ

ಭಾರಿ ಮಳೆ: ವಾವ್​! ಕಣ್ಮನ ಸೆಳೆಯುತ್ತಿದೆ ಹೊಗೇನಕಲ್ ಜಲಪಾತ

ಕಿರಣ್ ಹನುಮಂತ್​ ಮಾದಾರ್
|

Updated on:Jul 17, 2024 | 2:46 PM

ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ(Hogenakkal Falls)ಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕಲ್ಲು ಬಂಡೆಗಳಿಂದ ಧುಮ್ಮಿಕ್ಕುತ್ತಿರುವ ನೀರಿನ ರುದ್ರ ರಮಣೀಯ ದೃಶ್ಯ ನೋಡಲು ಎರಡು ಕಣ್ಣು ಸಾಲುತ್ತಿಲ್ಲ. ಇದೀಗ ಪ್ರವಾಸಿಗರ ಮೊಬೈಲ್ ಕ್ಯಾಮೆರಾದಲ್ಲಿ ಈ ನಯನ ಮನೋಹರ ದೃಶ್ಯ ಸೆರೆಯಾಗಿದೆ.

ಚಾಮರಾಜನಗರ, ಜು.17: ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಈ ಮಧ್ಯೆ ರಾಜ್ಯದ ಎಲ್ಲಾ ಜಲಪಾತಗಳಿಗೆ ಜೀವಕಳೆ ಬಂದಿದೆ. ಅದರಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕಾವೇರಿ ಹಾಗೂ ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದೆ. ಇದರಿಂದ ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ(Hogenakkal Falls)ಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕಲ್ಲು ಬಂಡೆಗಳಿಂದ ಧುಮ್ಮಿಕ್ಕುತ್ತಿರುವ ನೀರಿನ ರುದ್ರ ರಮಣೀಯ ದೃಶ್ಯ ನೋಡಲು ಎರಡು ಕಣ್ಣು ಸಾಲುತ್ತಿಲ್ಲ. ಇದೀಗ ಪ್ರವಾಸಿಗರ ಮೊಬೈಲ್ ಕ್ಯಾಮೆರಾದಲ್ಲಿ ಈ ನಯನ ಮನೋಹರ ದೃಶ್ಯ ಸೆರೆಯಾಗಿದ್ದು,ತಮಿಳುನಾಡು ಮತ್ತು ಕರ್ನಾಟಕ ಎರಡೂ ಭಾಗದಲ್ಲೂ ಜಲಪಾತದ ವಿಹಂಗಮ ನೋಟ ಕಣ್ಮನ ಸೆಳೆಯುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 17, 2024 02:42 PM