ಭಾರಿ ಮಳೆ, ಕಾರವಾರ ಕೆಎಸ್ಆರ್ಟಿಸಿ ಡಿಪೋ ಜಲಾವೃತ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ವಿವಿಧ ಕಡೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹಲವು ಕಡೆಗಳಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಡಿಪೋ ಸಂಪೂರ್ಣ ಜಲಾವೃತಗೊಂಡಿದ್ದು, ಬಸ್ಗಳನ್ನು ಹೊರತರಲು ಚಾಲಕರು ಪಡಿಪಾಟಲು ಅನುಭವಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಕಾರವಾರ, ಜೂನ್ 12: ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಾರವಾರದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಸಂಪೂರ್ಣ ಜಲಾವೃತಗೊಂಡಿದೆ. ಡಿಪೋದಿಂದ ಬಸ್ ಹೊರ ತೆಗೆಯಲು ಚಾಲಕರು ಪರದಾಟಪಡುವಂತಾಗಿದೆ. ಒದ್ದೆಯಾದ ವಸ್ತುಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಹರಸಾಹಸಪಡುವಂತಾಗಿದೆ.
Latest Videos