ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ

Edited By:

Updated on: Jun 12, 2025 | 9:18 AM

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ವಿವಿಧ ಕಡೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹಲವು ಕಡೆಗಳಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪಟ್ಟಣದಲ್ಲಿ ಕೆಎಸ್ಆರ್​ಟಿಸಿ ಡಿಪೋ ಸಂಪೂರ್ಣ ಜಲಾವೃತಗೊಂಡಿದ್ದು, ಬಸ್​ಗಳನ್ನು ಹೊರತರಲು ಚಾಲಕರು ಪಡಿಪಾಟಲು ಅನುಭವಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಕಾರವಾರ, ಜೂನ್ 12: ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಾರವಾರದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಪಟ್ಟಣದ ಕೆಎಸ್ಆರ್​ಟಿಸಿ ಡಿಪೋ ಸಂಪೂರ್ಣ ಜಲಾವೃತಗೊಂಡಿದೆ. ಡಿಪೋದಿಂದ ಬಸ್ ಹೊರ ತೆಗೆಯಲು ಚಾಲಕರು ಪರದಾಟಪಡುವಂತಾಗಿದೆ. ಒದ್ದೆಯಾದ ವಸ್ತುಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಹರಸಾಹಸಪಡುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್​, ಮಹಾವೀರ್​ ಉತ್ತರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More