AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Rain: ಮಳೆ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ

Belagavi Rain: ಮಳೆ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ

ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on:Jul 25, 2023 | 2:54 PM

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಇರುವ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ‌ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು ಕೊಚ್ಚಿ ಹೋಗುತ್ತಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಇರುವ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ‌ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು ಕೊಚ್ಚಿ ಹೋಗುತ್ತಿದೆ. ಸೇತುವೆ ಎರಡು ಗೋಡೆ ಹೊರತುಪಡಿಸಿ ಮಣ್ಣು ಸಮೇತ ರಸ್ತೆ ಕೊಚ್ಚಿಕೊಂಡು ಹೋಗಿದೆ. ರಸ್ತೆಯ ಎರಡು ಬದಿ ಹತ್ತು ಅಡಿಯಷ್ಟು ಕುಸಿದು ಕೆಳಗೆ ಸರಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ರಸ್ತೆ ಕುಸಿಯುತ್ತಿದೆ. ಇದರಿಂದ ಎನ್‌ಎಚ್‌ಎ ಸಿಬ್ಬಂದಿ ಪರ್ಯಾಯ ರಸ್ತೆ ಮಾರ್ಗದ ವ್ಯವಸ್ಥೆ ಮಾಡಿದ್ದಾರೆ.

Published on: Jul 25, 2023 01:12 PM

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More