ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ; ವಾಘವಾಡೆ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

TV9 Web
| Updated By: preethi shettigar

Updated on: Jul 23, 2021 | 12:47 PM

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿ ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ. ಈ ವೇಳೆ ಹಗ್ಗ ಎಸೆದು ಯುವಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ನಂದಗಡ ಡ್ಯಾಂಗೆ ಹರಿದು ಬರುತ್ತಿರುವ ನೀರು
ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಧಾರಾಕಾರವಾಗಿ ಮಳೆ ನೀರು ಹರಿದು ಬರುತ್ತಿದೆ. ‌ಪರಿಣಾಮವಾಗಿ ನಂದಗಡ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದ್ದು, ನಂದಗಡ ಗ್ರಾಮದ ಹೊರವಲಯದಲ್ಲಿ ಕೃಷಿ ಜಮೀನು ಜಲಾವೃತವಾಗಿದೆ. ಅಲ್ಲದೆ ಖಾನಾಪುರ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ:

Karnataka Rain: ಬೆಳಗಾವಿಯಲ್ಲಿ ಧಾರಾಕಾರ ಮಳೆ, ಪ್ರವಾಹ; ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಕರೆ

Karnataka Dams Water Level: ಕೊಡಗಿನಲ್ಲಿ 4 ದಿನ ಭಾರಿ ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ