ಭಾರೀ ಮಳೆಗೆ ಕೃಷ್ಣ ಥಿಯೇಟರ್ ಗೋಡೆ ಕುಸಿತ; ಬೈಕ್ ಜಖಂ ಆಗಿದ್ದಕ್ಕೆ ಜನರ ಆಕ್ರೋಶ
Bengaluru Rain: ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕೃಷ್ಣ ಚಿತ್ರಮಂದಿರದ ಗೋಡೆ ಕುಸಿದಿದ್ದು, ಬೈಕ್ ಜಖಂ ಆಗಿದೆ. ಬೈಕ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳು ಒಂದೆರಡಲ್ಲ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದರೆ ಜನರು ಎಲ್ಲಿಲ್ಲದ ಕಷ್ಟ ಅನುಭವಿಸಬೇಕಾಗುತ್ತದೆ. ಶುಕ್ರವಾರ (ಜೂನ್ 17) ರಾಜ್ಯ ರಾಜಧಾನಿಯಲ್ಲಿ ಧಾರಾಕಾರ ಮಳೆ (Bengaluru Rain) ಬಂದಿದೆ. ನೀರಿನಲ್ಲಿ ಯುವಕನೋರ್ವ ಕೊಚ್ಚಿಕೊಂಡು ಹೋಗಿ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ. ಇನ್ನು ಬೆಂಗಳೂರಿನ ಕೃಷ್ಣ ಚಿತ್ರಮಂದಿರದ ಗೋಡೆ ಕೂಡ ಕುಸಿದಿದೆ. ಇದರ ಪರಿಣಾಮವಾಗಿ ಬೈಕ್ ಜಖಂ ಆಗಿದೆ. ಥಿಯೇಟರ್ ಬಳಿ ಬೈಕ್ ಮಾಲೀಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರದ ಮಾಲಿಕರನ್ನು ಸ್ಥಳಕ್ಕೆ ಕರೆಸುವಂತೆ ಸಿಬ್ಬಂದಿಗಳಿಗೆ ಒತ್ತಾಯ ಮಾಡಲಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 18, 2022 01:43 PM