ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ; ಜನರ ಓಡಾಟ ಬಂದ್
ಸಂಜೆ ಸುರಿದ ಭಾರಿ ಮಳೆಗೆ ಆನೇಕಲ್ನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯಲ್ಲಿರುವ ನ್ಯೂ ವಿನ್ನರ್ ಖಾಸಗಿ ಶಾಲೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಕೂಡಲೇ ಗ್ರಾಪಂ ಪಿಡಿಒ ರಮೇಶ್ ಭೇಟಿ ನೀಡಿ, ಪಕ್ಕದ ಎರಡು ಕುಟುಂಬಗಳನ್ನು ಸ್ಥಳಾಂತರಿಸಿದರು ಹಾಗೂ ರಸ್ತೆ ಸಂಚಾರ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಆನೇಕಲ್, ಆಗಸ್ಟ್ 04: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆಯೇ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದ ಕಟ್ಟಡದಲ್ಲಿದ್ದ ಎರಡು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಆ ರಸ್ತೆಯಲ್ಲಿ ಸಾರ್ವಜನಿಕರ ಓಡಾಟವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ಶಾಲೆಗೆ ರಜೆ ಘೋಷಿಸಲಾಗಿದ್ದು, ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಸ್ಥಳ ಪರೀಶಿಲನೆ ಮಾಡಿದ್ದು, ಕಟ್ಟಡ ಸುರಕ್ಷಿತವಾಗಿದೆ ಎಂದು ವರದಿ ನೀಡಿದ ಬಳಿಕವಷ್ಟೇ ಶಾಲೆ ಪುನಾರಂಭಿಸಲು ಸೂಚಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?

