School Holiday: ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ

Updated on: Jun 16, 2025 | 8:09 AM

ಮುಂಗಾರು ಮಳೆಯ ಅಬ್ಬರ ಜೋರಾದ ಕಾರಣ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದ, ರಸ್ತೆ ಸಂಚಾರವೂ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು, ಜೂನ್ 16: ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್​ಆರ್​​​ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ