Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ

ವಿಜಯಪುರ: ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ

ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on: Jul 08, 2024 | 3:01 PM

ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಮಾತ್ರ ಆಲಮಟ್ಟಿ ಡ್ಯಾಂ ಭರ್ತಿಯಾಗುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಬರಗಾಲವಿದ್ದು ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದ ಕಾರಣ ಆಲಮಟ್ಟಿ ಡ್ಯಾಂ ಭರ್ತಿಯಾಗಿತ್ತು. ಈ ಬಾರಿಯೂ ಆಲಮಟ್ಟಿ ಜಲಾಶಯ ಭರ್ತಿಯಾಗಲಿದೆ.

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ವಿಜಯಪುರ (Vijayapura) ಜಿಲ್ಲೆಯ ಆಲಮಟ್ಟಿ ಡ್ಯಾಂಗೆ (Almatti Dam) ಒಳಹರಿವು ಹೆಚ್ಚಿದೆ. ಕೃಷ್ಣಾ ನದಿಯ ಉಗಮ ಸ್ಥಾನ ಮಹಾಬಲೇಶ್ವರ, ರತ್ನಾಗಿರಿ, ಚಿಪ್ಲೂನ್ ಹಾಗೂ ಇತರ ಪ್ರದೇಶಗಳಲ್ಲಿ ಉತ್ತಮ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯಕ್ಕೆ ಇಂದು (ಜು.08) 60,703 ಕ್ಯೂಸೆಕ್ ಒಳಹರಿವು ಇದ್ದು, ಕುಡಿಯುವ ನೀರು ಹಾಗೂ ವಿವಿಧ ಯೋಜನೆಗಳಿಗಾಗಿ 430 ಕ್ಯೂಸೆಕ್ ನೀರು ಹೊರಗೆ ಬಿಡಲಾಗಿದೆ. ಡ್ಯಾಂ ಭರ್ತಿಗೆ 4.54 ಮೀಟರ್ ಮಾತ್ರ ಬಾಕಿ ಇದೆ. 123 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ 64 ಟಿಎಂಸಿ ನೀರು ಸಂಗ್ರಹವಾಗಿದೆ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಮಾತ್ರ ಆಲಮಟ್ಟಿ ಡ್ಯಾಂ ಭರ್ತಿಯಾಗುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಬರಗಾಲವಿದ್ದು ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದ ಕಾರಣ ಆಲಮಟ್ಟಿ ಡ್ಯಾಂ ಭರ್ತಿಯಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಆಗುತ್ತಿರುವ ಕಾರಣ ಡ್ಯಾಂ ಭರ್ತಿ ಆಗುತ್ತದೆ ಎಂದು ಈ ಭಾಗದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಡ್ಯಾಂಗೆ 26 ಕ್ರಸ್ಟ್​ ಗೇಟ್​ಗಳನ್ನ ಅಳವಡಿಸಲಾಗಿದ್ದು ಯಾವುದೇ ಕ್ರಸ್ಟ್ ಗೇಟ್ ಓಪನ್ ಮಾಡಿಲ್ಲ. ಕ್ರಸ್ಟ್ ಗೇಟ್ ಓಪನ್ ಮಾಡಿದ ಬಳಿಕ ಹೆಚ್ಚಾಗಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ನೋಡಿ: ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ