ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ರಾಮನಗರ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಪರಿಣಾಮವಾಗಿ ಮಾಗಡಿ ಪಟ್ಟಣದ ನಟರಾಜ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ರಾಮನಗರ ಜಿಲ್ಲೆಯಲ್ಲಿ ಮಳೆಯಿಂದ ಆದ ಅವಾಂತರಗಳ ವಿಡಿಯೋ ಇಲ್ಲಿದೆ ನೋಡಿ.
ರಾಮನಗರ, ಮೇ 15: ರಾಮನಗರ ಜಿಲ್ಲೆಯ ಹಲವೆಡೆ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಯಿತು. ಮಾಗಡಿ ಪಟ್ಟಣದ ನಟರಾಜ ಬಡಾವಣೆಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ಪರದಾಡಿದರು. ಮಾಗಡಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಇತರ ರಸ್ತೆಗಳು, ಮನೆ ಒಳಗೆ ಮಳೆ ನೀರು ನುಗ್ಗಿತು. ಮಾಹಿತಿ ನೀಡಿದರೂ ಸ್ಥಳಕ್ಕೆ ಬಾರದ ಮಾಗಡಿ ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
