TTD: ತಿರುಪತಿಯಲ್ಲಿ ಭಾರಿ ಮಳೆ, ಪ್ರವಾಹದ ಸ್ಥಿತಿ ನಿರ್ಮಾಣ; ವಿಡಿಯೋ ನೋಡಿ

Thirupathi: ತಿರುಪತಿಯಲ್ಲಿ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಭಕ್ತರಿಗೆ ಇನ್ನೆರಡು ದಿನಗಳ ಕಾಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ತಿರುಮಲ ತಿರುಪತಿಯಲ್ಲಿ ನಿನ್ನೆ (ಗುರುವಾರ) ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದೇವಾಲಯವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದ್ದು, ತೀವ್ರ ಮುನ್ನೆಚ್ಚರಿಕೆ ಘೋಷಿಸಲಾಗಿದೆ. ಮಳೆಯಿಂದ ತಿರುಪತಿಯ ಎರಡು ಘಾಟ್​ಗಳು ಬಂದ್ ಆಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಮಳೆಯಿಂದ ಯಾತ್ರಾರ್ಥಿಗಳಿಗೆ, ಸ್ಥಳೀಯರಿಗೆ ಬಹಳ ಸಮಸ್ಯೆಯಾಗಿದ್ದು, ಆಡಳಿತ ಮಂಡಳಿ ಯಾತ್ರಾರ್ಥಿಗಳಿಗೆ ಉಚಿತ ಆಹಾರ ಮತ್ತು ವಸತಿಯನ್ನು ನೀಡುತ್ತಿದೆ. ತೀವ್ರ ಮಳೆಯ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದ್ದು, ತಿರುಪತಿಗೆ ಜಲದಿಗ್ಭಂದನವಾಗಿದೆಯೇ ಎಂಬ ಭಾವ ಮೂಡಿಸುವಂತಿದೆ.

ಆಂಧ್ರಪ್ರದೇಶದಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ:

Tirupathi: ತಿರುಪತಿಯಲ್ಲಿ ಪ್ರವಾಹದ ಪರಿಸ್ಥಿತಿ, ಗುಡ್ಡಗಳಿಂದ ಭೋರ್ಗರೆಯುತ್ತಿರುವ ನೀರು; ವಿಡಿಯೋ ನೋಡಿ

Tirupathi: ಭಾರಿ ಮಳೆಯಿಂದ ಟಿಟಿಡಿಯ 2 ಘಾಟ್​ಗಳು ಕ್ಲೋಸ್; ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ

Click on your DTH Provider to Add TV9 Kannada