AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jun 28, 2026 | 1:40 PM

Share

ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಅಬ್ಬರದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಇತಿಹಾಸ ಪ್ರಸಿದ್ಧ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಚರಂಡಿ ಹೂಳು ತೆಗೆಯದ ಕಾರಣ ಇಡೀ ಗೋಕರ್ಣದ ಬೀದಿಗಳು ಹಳ್ಳದಂತಾಗಿದ್ದು, ಮಧ್ಯಾಹ್ನ 12:30ರ ನಿತ್ಯ ಮಹಾಪೂಜೆಗೂ ಅಡ್ಡಿಯಾಗಿದೆ. ಮತ್ತೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ-ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಯಲ್ಲೇ ನದಿಯಂತೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪ್ರಾಣದ ಹಂಗು ತೊರೆದು ಪರದಾಡುವಂತಾಗಿದೆ.

ಉತ್ತರ ಕನ್ನಡ, ಜೂನ್ 28: ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಅಬ್ಬರದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಇತಿಹಾಸ ಪ್ರಸಿದ್ಧ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಚರಂಡಿ ಹೂಳು ತೆಗೆಯದ ಕಾರಣ ಇಡೀ ಗೋಕರ್ಣದ ಬೀದಿಗಳು ಹಳ್ಳದಂತಾಗಿದ್ದು, ಮಧ್ಯಾಹ್ನ 12:30ರ ನಿತ್ಯ ಮಹಾಪೂಜೆಗೂ ಅಡ್ಡಿಯಾಗಿದೆ. ಮತ್ತೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ-ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಯಲ್ಲೇ ನದಿಯಂತೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪ್ರಾಣದ ಹಂಗು ತೊರೆದು ಪರದಾಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More