AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ

ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ

ಅಶೋಕ್​ ಪೂಜಾರಿ
| Edited By: |

Updated on: Jul 17, 2026 | 12:00 PM

Share

Uttara Kannada news: ಉತ್ತರ ಕನ್ನಡದ ಅಂಕೋಲಾ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅಂಕೋಲಾ ತಹಶೀಲ್ದಾರ್ ಈ ಆದೇಶ ಹೊರಡಿಸಿದ್ದಾರೆ. ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಮತ್ತೊಂದೆಡೆ, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ-ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿ ಸಂಚಾರಕ್ಕೆ ಅಡ್ಡಿಯಾಗಿದೆ. ಸದ್ಯ ರಸ್ತೆಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More