ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್
ಮಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಮಂಜೂರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದಿದೆ. ಮಂಗಳೂರು-ಮೂಡಬಿದ್ರೆ-ಕಾರ್ಕಳ ರಸ್ತೆ ಸಂಪೂರ್ಣವಾಗಿ ಅಡಚಣೆಯಾಗಿದೆ. ಆಟೋ ಒಂದು ಹಾದು ಹೋಗುವಾಗಲೇ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಬದಿಯ ರಸ್ತೆ ಮಾತ್ರ ಉಳಿದಿದ್ದು, ದ್ವಿಮುಖ ಸಂಚಾರ ನಡೆಯುತ್ತಿದೆ.
ಮಂಗಳೂರು, ಜೂನ್ 14: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತವಾಗವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಗುಡ್ಡ ಕುಸಿದಿದೆ. ಅದೃಷ್ಟವಶಾತ ಯಾವುದೇ ಅನಾಹುತ ಸಂಭವಿಸಿಲ್ಲ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿದೆ. ಒಂದು ಬದಿಯ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಸಂಚಾರ ನಡೆಸುತ್ತಿವೆ.
Published on: Jun 14, 2025 10:19 PM
Latest Videos