Mangaluru Rains: ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ

Updated By: Ganapathi Sharma

Updated on: Apr 11, 2025 | 8:47 AM

ಮಂಗಳೂರು ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಭಾರಿ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಬಸವಳಿದಿದ್ದ ಮಂಗಳೂರು ನಗರಕ್ಕೆ ವರ್ಷಧಾರೆ ತಂಪೆರೆದಿದೆ. ಮುಂಜಾನೆಯೇ ಸುರಿದ ಮಳೆ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹೋಗುವವರಿಗೆ ಕಿರಿಕಿರಿ ಉಂಟುಮಾಡಿತು. ಮಳೆಯ ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಏಪ್ರಿಲ್ 11: ಮಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದೆ.ನಗರದ ವಿವಿಧೆಡೆ ಶುಕ್ರವಾರ ಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಯಿಂದ ಎಡೆಬಿಡದೆ ವರ್ಷಧಾರೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಸಾರ್ವಜನಿಕರು ಹೈರಾಣಾದರು. ದಿನನಿತ್ಯದ ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಪರದಾಡುವಂತಾಯಿತು. ಮಳೆಯ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ