ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು

Updated on: Sep 04, 2026 | 9:08 PM

ಮಹಿಪಾಲಪುರವು ದೆಹಲಿ ವಿಮಾನ ನಿಲ್ದಾಣ ಮತ್ತು ಗುರುಗ್ರಾಮವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವುದರಿಂದ, ರಸ್ತೆಯಲ್ಲಿ ನೀರು ನಿಂತು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದಾಗಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸಿದರು. ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ಇಲಾಖೆಯು 'ರೆಡ್ ಅಲರ್ಟ್' ಘೋಷಿಸಿದ್ದು, ಗುಡುಗು, ಮಿಂಚು ಸಹಿತ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ನವದೆಹಲಿ, ಸೆಪ್ಟೆಂಬರ್ 4: ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ಪ್ರಮುಖ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಂತ ಸಮೀಪದಲ್ಲಿರುವ ಮಹಿಪಾಲಪುರ ಪ್ರದೇಶ ಜಲಾವೃತವಾಗಿದೆ. ರಸ್ತೆಯಲ್ಲಿ ನಿಂತ ನೀರಿನಲ್ಲಿ ಮಕ್ಕಳು ಈಜಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಮಹಿಪಾಲಪುರದ ಪ್ರಮುಖ ರಸ್ತೆಗಳು ಹಾಗೂ ಅಂಡರ್‌ಪಾಸ್‌ಗಳು ಕೆರೆಯಂತಾಗಿದ್ದು, ವಾಹನ ಸಂಚಾರ ಬಂದ್ ಆಗಿ ಸವಾರರು ಪರದಾಡುವಂತಾಯಿತು.

ಮಹಿಪಾಲಪುರವು ದೆಹಲಿ ವಿಮಾನ ನಿಲ್ದಾಣ ಮತ್ತು ಗುರುಗ್ರಾಮವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವುದರಿಂದ, ರಸ್ತೆಯಲ್ಲಿ ನೀರು ನಿಂತು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದಾಗಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸಿದರು. ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದ್ದು, ಗುಡುಗು, ಮಿಂಚು ಸಹಿತ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More