ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ

Edited By:

Updated on: Jun 17, 2025 | 9:13 AM

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಪರಿಣಾಮವಾಗಿ ಕೊಡಗು ಜಿಲ್ಲೆಯ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ತ್ರಿವೇಣಿ ಸಂಗಮ ಜಲಾವೃತದ ವಿಡಿಯೋ ಇಲ್ಲಿದೆ ನೋಡಿ.

ಮಡಿಕೇರಿ, ಜೂನ್ 17: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ಮಾರ್ಗದ ರಸ್ತೆ ಕೂಡ ಜಲಾವೃತಗೊಂಡಿದೆ. ನೂತನ ಫ್ಲೈಓವರ್ ಇರುವುದರಿಂದ ಸಂಚಾರ ನಿರಾತಂಕವಾಗಿ ಸಾಗಿದೆ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 17, 2025 09:13 AM