ಬೆಂಗಳೂರಿನ ಸುತ್ತಮುತ್ತ ಧಾರಾಕಾರ ಮಳೆ; ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳ ಪರದಾಟ

Edited By: ಆಯೇಷಾ ಬಾನು

Updated on: Jul 08, 2023 | 3:19 PM

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಿಢೀರನೆ ಸುರಿದ ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ.

ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಅಶೋಕನಗರ, ಮೈಸೂರು ಬ್ಯಾಂಕ್ ಸರ್ಕಲ್, ರಾಜಾಜಿನಗರ, ಜಯನಗರ, ಶಿವಾಜಿನಗರ, ಕೆ.ಆರ್​.ಮಾರುಕಟ್ಟೆ, ಮೆಜೆಸ್ಟಿಕ್, ಬನಶಂಕರಿ, ಯಶವಂತಪುರ, ಹೆಬ್ಬಾಳ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More