AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 25, 2026 | 9:19 AM

Share

ಗದಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಈ ಭಾರೀ ಮಳೆ ಜನಜೀವನಕ್ಕೆ ತೀವ್ರ ಅಡಚಣೆ ಉಂಟುಮಾಡಿದೆ. ಮುಂಡರಗಿಯ ದಿಂಡೂರ ತಾಂಡಾದಲ್ಲಿ ಮನೆಗಳ ಮೇಲ್ಛಾವಣಿ ಹಾರಿಬಿದ್ದು ಮೂವರಿಗೆ ಗಾಯಗಳಾಗಿವೆ. ಬಿರುಗಾಳಿಯಿಂದ ಹಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಸೇರಿದಂತೆ ಅನೇಕ ವಾಹನಗಳು ಜಖಂ ಆಗಿವೆ.

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು ಗುರುತಿಸಲಾಗಿದೆ. ಭಾರೀ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಕತ್ತಲಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More