AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್, ರಿಷಿಕೇಶ–ಬದರಿನಾಥ ರಸ್ತೆ ಸಂಚಾರ ಸ್ಥಗಿತ

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್, ರಿಷಿಕೇಶ–ಬದರಿನಾಥ ರಸ್ತೆ ಸಂಚಾರ ಸ್ಥಗಿತ

ನಯನಾ ರಾಜೀವ್
|

Updated on:Sep 27, 2026 | 1:43 PM

Share

ಉತ್ತರಾಖಂಡದಲ್ಲಿ ನಿರಂತರ ಮಳೆಯ ಅಬ್ಬರ ಮುಂದುವರೆದಿದ್ದು, ಭೂಕುಸಿತದ ಕಾರಣ ಬದರಿನಾಥ್–ರಿಷಿಕೇಶ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್ ಆಗಿದೆ. ಶ್ರೀನಗರ ಸಮೀಪದ ಭೂಕುಸಿತ ಪೀಡಿತ ಸಿರೋಬಗರ್ ಪ್ರದೇಶದಲ್ಲಿ ಬೆಟ್ಟದ ಮಣ್ಣು ಮತ್ತು ಬಂಡೆಗಳು ರಸ್ತೆಗೆ ಜಾರಿಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಉತ್ತರಾಖಂಡ, ಸೆಪ್ಟೆಂಬರ್ 27: ಉತ್ತರಾಖಂಡದಲ್ಲಿ ನಿರಂತರ ಮಳೆಯ ಅಬ್ಬರ ಮುಂದುವರೆದಿದ್ದು, ಭೂಕುಸಿತದ ಕಾರಣ ಬದರಿನಾಥ್–ರಿಷಿಕೇಶ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್ ಆಗಿದೆ. ಶ್ರೀನಗರ ಸಮೀಪದ ಭೂಕುಸಿತ ಪೀಡಿತ ಸಿರೋಬಗರ್ ಪ್ರದೇಶದಲ್ಲಿ ಬೆಟ್ಟದ ಮಣ್ಣು ಮತ್ತು ಬಂಡೆಗಳು ರಸ್ತೆಗೆ ಜಾರಿಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಸ್ತೆ ಬಂದ್ ಆಗಿರುವುದರಿಂದ ಬದರಿನಾಥ ಧಾಮಕ್ಕೆ ತೆರಳುತ್ತಿದ್ದ ಹಾಗೂ ಅಲ್ಲಿಂದ ಹಿಂದಿರುಗುತ್ತಿದ್ದ ನೂರಾರು ಯಾತ್ರಿಕರ ವಾಹನಗಳು ಎರಡೂ ಬದಿಗಳಲ್ಲಿ ಸಿಲುಕಿಕೊಂಡಿವೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ವಿಪತ್ತು ನಿರ್ವಹಣಾ ತಂಡಗಳು ತೆರಳಿ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿವೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಿರೋಬಗರ್ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಮುಂದುವರೆದಿದೆ. ಹೀಗಾಗಿ ಯಾತ್ರಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮತ್ತು ಹವಾಮಾನ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Sep 27, 2026 01:43 PM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More