ಧಾರಾಕಾರ ಮಳೆಗೆ ನಡುಗಿದ ಸಿಕ್ಕಿಂ, ರಿಂಬಿ ಗ್ರಾಮದಲ್ಲಿ ಭೀಕರ ಭೂಕುಸಿತ

Updated on: Sep 25, 2026 | 7:43 AM

ಪಶ್ಚಿಮ ಸಿಕ್ಕಿಂ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುರುವಾರ ರಾತ್ರಿ ರಿಂಬಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಯುಕ್ಸಮ್-ತಾಶಿದಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗುಡ್ಡಗಾಡು ಪ್ರದೇಶದಲ್ಲಿ ಬೆಟ್ಟದ ಮಣ್ಣು ಮತ್ತು ಬಂಡೆಗಳು ಏಕಾಏಕಿ ಕುಸಿದು ಬಿದ್ದ ಪರಿಣಾಮ ರಸ್ತೆಗಳು ಹಾಗೂ ಸಾರ್ವಜನಿಕ ಆಸ್ತಪಾಸ್ತಿಗೆ ವ್ಯಾಪಕ ಹಾನಿಯಾಗಿದೆ.

ಸಿಕ್ಕಿಂ, ಸೆಪ್ಟೆಂಬರ್ 25: ಪಶ್ಚಿಮ ಸಿಕ್ಕಿಂ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುರುವಾರ ರಾತ್ರಿ ರಿಂಬಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಯುಕ್ಸಮ್-ತಾಶಿದಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗುಡ್ಡಗಾಡು ಪ್ರದೇಶದಲ್ಲಿ ಬೆಟ್ಟದ ಮಣ್ಣು ಮತ್ತು ಬಂಡೆಗಳು ಏಕಾಏಕಿ ಕುಸಿದು ಬಿದ್ದ ಪರಿಣಾಮ ರಸ್ತೆಗಳು ಹಾಗೂ ಸಾರ್ವಜನಿಕ ಆಸ್ತಪಾಸ್ತಿಗೆ ವ್ಯಾಪಕ ಹಾನಿಯಾಗಿದೆ.

ಮಧ್ಯರಾತ್ರಿ ಈ ಅವಘಡ ಸಂಭವಿಸಿದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ದೃಢಪಡಿಸಿದೆ. ಸ್ಥಳಕ್ಕೆ ಧಾವಿಸಿರುವ ವಿಪತ್ತು ನಿರ್ವಹಣಾ ಪಡೆಗಳು ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುತ್ತಿದ್ದು, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹಿಮಾಲಯದ ತಪ್ಪಲಿನ ಸಿಕ್ಕಿಂನಲ್ಲಿ ಮಳೆಗಾಲದಲ್ಲಿ ಮಣ್ಣಿನ ಸಡಿಲತೆಯಿಂದಾಗಿ ಭೂಕುಸಿತಗಳು ಸಾಮಾನ್ಯವಾಗಿದ್ದು, ಪ್ರಮುಖ ಸಂಪರ್ಕ ರಸ್ತೆಗಳು ಕಡಿತಗೊಂಡಾಗ ಸ್ಥಳೀಯ ಆಡಳಿತವು ತ್ವರಿತವಾಗಿ ಬದಲಿ ಮಾರ್ಗಗಳನ್ನು ಕಲ್ಪಿಸುತ್ತದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More