ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಭಾರಿ ಮಳೆಯಾಗಿದ್ದು, ಬಸ್ ನಿಲ್ದಾಣ ಜಲಾವೃತಗೊಂಡಿದೆ. ಪ್ರಯಾಣಿಕರು ನೀರಿನಲ್ಲಿ ನಿಂತು ಬಸ್‌ಗಾಗಿ ಕಾಯುವಂತಾಯಿತು. ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು, ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ತಿಳಿಸಿದೆ. ಈ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಜಮಖಂಡಿ ಬಸ್ ನಿಲ್ದಾಣದೊಳಗೆ ನೀರು ನುಗ್ಗಿದ್ದು ಪ್ರಯಾಣಿಕರು ಪರದಾಡಿದರು. ನಿಲ್ದಾಣದೊಳಗೆ ನೀರು ನುಗ್ಗಿದ್ದರಿಂದ ಪ್ರಯಾಣಿಕರು ನೀರಿನಲ್ಲೇ ನಿಂತು ಬಸ್‌ಗಾಗಿ ಕಾಯ್ದರು. ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.
Latest Videos