ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು

ವಿವೇಕ ಬಿರಾದಾರ

Updated on: Jun 07, 2025 | 10:18 PM

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಭಾರಿ ಮಳೆಯಾಗಿದ್ದು, ಬಸ್ ನಿಲ್ದಾಣ ಜಲಾವೃತಗೊಂಡಿದೆ. ಪ್ರಯಾಣಿಕರು ನೀರಿನಲ್ಲಿ ನಿಂತು ಬಸ್‌ಗಾಗಿ ಕಾಯುವಂತಾಯಿತು. ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು, ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ತಿಳಿಸಿದೆ. ಈ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಜಮಖಂಡಿ ಬಸ್​ ನಿಲ್ದಾಣದೊಳಗೆ ನೀರು ನುಗ್ಗಿದ್ದು ಪ್ರಯಾಣಿಕರು ಪರದಾಡಿದರು. ನಿಲ್ದಾಣದೊಳಗೆ ನೀರು ನುಗ್ಗಿದ್ದರಿಂದ ಪ್ರಯಾಣಿಕರು ನೀರಿನಲ್ಲೇ ನಿಂತು ಬಸ್​ಗಾಗಿ ಕಾಯ್ದರು. ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.