ಮಹಾರಾಷ್ಟ್ರದಲ್ಲಿ ಅಧಿಕ ಮಳೆ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಬ್ಯಾರೆಜ್ ಮುಳುಗಡೆ
ಮಹಾರಾಷ್ಟ್ರದ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ-ಬಾವನಸೌದತ್ತಿಯಲ್ಲಿ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ.
ಬೆಳಗಾವಿ: ಕರ್ನಾಟಕದಲ್ಲಿ ಮಳೆ (Karnataka Rain) ಪ್ರಮಾಣ ಕಡಿಮೆಯಾಗಿದ್ದರೂ, ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಉತ್ತಮ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಸತಾರಾ, ಕರಾಡ, ಕೊಲ್ಹಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ (Krishna River) ಒಳ ಹರಿವು ಹೆಚ್ಚಳವಾಗಿದೆ. ಇದರಿಂದ ಜಿಲ್ಲೆಯ ಚಿಕ್ಕೋಡಿ (Chikodi) ತಾಲೂಕಿನ ಮಾಂಜರಿ ಗ್ರಾಮದ ಮಾಂಜರಿ-ಬಾವನಸೌದತ್ತಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ. ಇದರಿಂದ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮಕ್ಕೆ ಸಂಪರ್ಕ ಕಟ್ ಆಗಿದೆ. ಬ್ಯಾರೇಜ್ ಮುಳುಗಡೆ ಹಿನ್ನೆಲೆ ಪರ್ಯಾಯ ಮಾರ್ಗ ಬಳಸಿ ಜನರು ಸಂಚಾರ ಮಾಡುತ್ತಿದ್ದಾರೆ.
