ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ; ಜನಜೀವನ ಅಸ್ತವ್ಯಸ್ತ

Edited By:

Updated on: Sep 23, 2026 | 2:18 PM

ವಾಯುಭಾರ ಕುಸಿತದ ಪರಿಣಾಮವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಕುಮಟಾ, ಹೊನ್ನಾವರ ಮತ್ತು ಅಂಕೋಲಾ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಇನ್ನಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಉತ್ತರ ಕನ್ನಡ, ಸೆಪ್ಟೆಂಬರ್ 23: ವಾಯುಭಾರ ಕುಸಿತದಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಕುಮಟಾ, ಹೊನ್ನಾವರ ಮತ್ತು ಅಂಕೋಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಪೂರ್ವಭಾವಿಯಾಗಿ ಸಕ್ರಿಯವಾಗಿದ್ದರೂ, ವಾಯುಭಾರ ಕುಸಿತವು ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ಗಂಟೆಗಳಲ್ಲಿ ಇದೇ ಪ್ರದೇಶಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 23, 2026 02:14 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More