ವಿಡಿಯೋ; ಬೆಂಗಳೂರಿನಲ್ಲಿ ಸಂಜೆ ಭಾರೀ ಮಳೆ, ಶಿವಾನಂದ ಸರ್ಕಲ್ ಅವಸ್ಥೆ ಹೇಗಿದೆ ನೋಡಿ

|

Updated on: May 30, 2023 | 9:42 PM

ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಸಂಚಾರದ ದಟ್ಟಣೆ ಉಂಟಾಯಿತು. ಕಚೇರಿಯಿಂದ ಮನೆಗೆ ತೆರಳುತ್ತಿದ್ದವರು ಮಾರ್ಗ ಮಧ್ಯೆ ಸಿಲುಕುವಂತಾಯಿತು. ಶಿವಾನಂದ ಸರ್ಕಲ್ ಬಳಿಯಂತೂ ರಸ್ತೆಯಲ್ಲೇ ಜಲಾವೃತವಾಗಿತ್ತು. ದ್ವಿಚಕ್ರ ವಾಹನ ಸವಾರರು ಪರದಾಡುತ್ತಿರುವುದು ಕಂಡುಬಂತು.

ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ತುಸು ಮಳೆಯಾಗುತ್ತಿದ್ದರೆ, ಮಂಗಳವಾರ ನಗರದಾದ್ಯಂತ ವರ್ಷಧಾರೆಯೇ (Bangalore Rains) ಸುರಿದಿದೆ. ಮಧ್ಯಾಹ್ನದಿಂದಲೇ ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ, ಶಾಂತಿನಗರ, ಜಯನಗರ, ಕೆಆರ್​ ಮಾರುಕಟ್ಟೆ, ವಿಜಯನಗರ, ಮೆಜೆಸ್ಟಿಕ್, ಬನಶಂಕರಿ, ಜೆಪಿನಗರ, ರಾಜಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿತ್ತು. ರಸ್ತೆಗಳಲ್ಲಿ ನೀರು ನಿಂತು ಜನರು ಪರದಾಡುವಂತಾಗಿದೆ.

ಈ ಮಧ್ಯೆ, ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಸಂಚಾರದ ದಟ್ಟಣೆ ಉಂಟಾಯಿತು. ಕಚೇರಿಯಿಂದ ಮನೆಗೆ ತೆರಳುತ್ತಿದ್ದವರು ಮಾರ್ಗ ಮಧ್ಯೆ ಸಿಲುಕುವಂತಾಯಿತು. ಶಿವಾನಂದ ಸರ್ಕಲ್ ಬಳಿಯಂತೂ ರಸ್ತೆಯಲ್ಲೇ ಜಲಾವೃತವಾಗಿತ್ತು. ದ್ವಿಚಕ್ರ ವಾಹನ ಸವಾರರು ಪರದಾಡುತ್ತಿರುವುದು ಕಂಡುಬಂತು.

ಇದನ್ನೂ ಓದಿ: Karnataka Rains: ಮುಂದಿನ 48 ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ