ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಮೋಡ ಕವಿದ ವಾತಾವರಣ ಇದೆ. ಕಳೆದ ಎರಡು ದಿನಗಳಿಂದ ಮಂಗಳೂರು, ಬಂಟ್ವಾಳ, ಸುಳ್ಯ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕೆಲವಡೆ
ಮಂಗಳೂರು, ಜ.4: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರು (Mangaluru rain) ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇಂದು ಬೆಳಗ್ಗೆಯಿಂದ ಹಲವೆಡೆ ತುಂತುರು ಮಳೆ ಆರಂಭವಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದೆ. ಮುಂದಿನ ಐದು ದಿನಗಳ ಕಾಲ ಮೋಡ ಮಿಶ್ರಿತ ಹವಾಮಾನ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕಾಲಿಕ ಮಳೆಯಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos