ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿದು ವಾಹನ ಸವಾರರ ಪರದಾಟ

Edited By:

Updated on: Sep 29, 2026 | 12:11 PM

ಕರ್ನಾಟಕದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ. ಚಾಮರಾಜನಗರದ ಹನೂರಿನಲ್ಲಿ ಅಪಾರ ಮಳೆಯಾಗಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಜನರು ಮಳೆ ಅವಾಂತರದಿಂದ ತೀವ್ರ ತೊಂದರೆ ಅನುಭವಿಸಿದ್ದಾರೆ.

ಚಾಮರಾಜನಗರ/ಮಂಡ್ಯ, ಸೆಪ್ಟೆಂಬರ್​​ 29: ಕರ್ನಾಟಕದಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಮಂಡ್ಯ ನಗರದಲ್ಲಿ ಸುರಿದ ಭಾರಿ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿದ್ದು, ಮಹಾವೀರ ವೃತ್ತ ಸಂಪೂರ್ಣವಾಗಿ ನೀರಿನಿಂದ ಆವೃತವಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ, ನಗರದ ಹಲವೆಡೆ ಮನೆಗಳಿಗೂ ನೀರು ನುಗ್ಗಿ ನಿವಾಸಿಗಳಿಗೆ ತೊಂದರೆಯಾಗಿದೆ. ಮತ್ತೊಂದೆಡೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿಯೂ ಭಾರಿ ಮಳೆಯಾಗಿದ್ದು, ಸಾಲು ಸಾಲು ಅವಾಂತರಗಳು ನಡೆದಿವೆ. ಹುಬ್ಬೇಹುಣಸೆ ಕೆರೆ ಹಾಗೂ ಸ್ವಾಮಿಹಳ್ಳ ತುಂಬಿ ಹರಿದು ಸೇತುವೆಗಳು ಜಲಾವೃತವಾಗಿವೆ. ಮುಖ್ಯ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದಿದೆ. ಮಳೆ ಆರ್ಭಟಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಸಣ್ಣ ಬಂಡೆಕಲ್ಲುಗಳು ಮತ್ತು ಮಣ್ಣು ರಸ್ತೆಗಳ ಮೇಲೆ ಕುಸಿದು ಬಿದ್ದಿದ್ದು, ಮುಖ್ಯ ರಸ್ತೆ ಕೆಸರುಮಯವಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿ, ಭಕ್ತಾದಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More