Rains cause havoc: ಮೈಸೂರಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ವಾಟಾಳು ಗ್ರಾಮದ ಬಾಳೆತೋಟವೊಂದು ಸರ್ವನಾಶ!

Updated on: May 12, 2023 | 5:56 PM

ವಿಧಾನಸಭಾ ಚುನಾವಣೆ ಫಲಿತಾಂಶವನ್ನು ಕಾತುರ ಮತ್ತು ಅತಂಕದಿಂದ ಎದುರು ನೋಡುತ್ತಿರುವ ಸರ್ಕಾರದ ಪ್ರತಿನಿಧಿಗಳಿಗೆ ಸೋಮಣ್ಣನ ಮೊರೆ ತಲುಪಲಾರದು.

ಮೈಸೂರು: ನಿನ್ನೆ ಮೈಸೂರು ಜಿಲ್ಲೆಯಲ್ಲಿ ಸುರಿದ ಮಳೆ ಈ ಬಾಳೆತೋಟವನ್ನು (banana plantation) ಅಕ್ಷರಶಃ ಧ್ವಂಸ ಮಾಡಿದೆ. ಜಿಲ್ಲೆಯ ಟಿ ನರಸೀಪುರದಲ್ಲಿರುವ ವಾಟಾಳು ಗ್ರಾಮದ ಜಯಮ್ಮನವರಿಗೆ (Jayamma) ಸೇರಿದ ಬಾಳೆ ತೋಟವಿದು. ಬೆಳೆಹಾನಿಯಿಂದ ಕಂಗಾಲಾಗಿರುವ ಜಯಮ್ಮನವರ ಮಗ ಸೋಮಣ್ಣ (Somanna) ನೆರವು ಕೋರಿ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಬಾಳೆ ಬೆಳೆಯಲು ರೂ. 15 ಲಕ್ಷ ಖರ್ಚು ಮಾಡಿರುವುದಾಗಿ ಹೇಳುವ ಸೋಮಣ್ಣ ಸುಮಾರು ರೂ. 35 ಲಕ್ಷಗಳಷ್ಟು ಇಳುವರಿ ಹಾಳಾಗಿದೆ ಎನ್ನುತ್ತಾರೆ. ವಿಧಾನಸಭಾ ಚುನಾವಣೆ ಫಲಿತಾಂಶವನ್ನು ಕಾತುರ ಮತ್ತು ಅತಂಕದಿಂದ ಎದುರು ನೋಡುತ್ತಿರುವ ಸರ್ಕಾರದ ಪ್ರತಿನಿಧಿಗಳಿಗೆ ಸೋಮಣ್ಣನ ಮೊರೆ ತಲುಪಲಾರದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More