ಕೆರೆಯಂತಾದ ದಿಶಾ ಅಪಾರ್ಟ್​ಮೆಂಟ್ ಬೇಸ್ಮೆಂಟ್, ಪಾಲಿಕೆಯನ್ನು ದೂರಿದ ನಿವಾಸಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Oct 16, 2024 | 10:37 AM

ಅಪಾರ್ಟ್​ಮೆಂಟ್ ನಿವಾಸಿಗಳು ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು ಒಳಗೆ ನುಗ್ಗದ ಹಾಗೆ ಮೇನ್ ಗೇಟ್ ಬಳಿ ಎಂ-ಸ್ಯಾಂಡ್ ಹಾಕಿಸಿಕೊಂಡು ತಾತ್ಕಾಲಿಕ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಚರಂಡಿಯನ್ನು ಸ್ವಚ್ಛಗೊಳಿಸದ ಕಾರಣ ಮಳೆನೀರು ರಸ್ತೆಮೇಲೆ ಬಂದು ಅಪಾರ್ಟ್​ಮೆಂಟ್ ನ ಬೇಸ್ಮೆಂಟ್​ಗೆ ನುಗ್ಗುತ್ತಿದೆ ಎಂದು ಅವರು ಹೇಳುತ್ತಾರೆ.

ಬೆಂಗಳೂರು: ನಿನ್ನೆ ಸುರಿದ ಭೀಕರ ಮಳೆಗೆ ನಗರದ ಸ್ಥಿತಿ ಏನಾಗಿತ್ತು ಅನ್ನೋದನ್ನು ಹೇಳಿದ್ದೇವೆ. ನಗರದ ನಿವಾಸಿಗಳು ರಾತ್ರಿಪಟ್ಟ ಕಷ್ಟದ ಬಗ್ಗೆ ಬಹಳ ಜನಕ್ಕೆ ಗೊತ್ತಾಗಿರಲಾರದು. ವರ್ತೂರು ಹತ್ತಿರದ ದಿಶಾ ಅಪಾರ್ಟ್​ಮೆಂಟ್ ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡುವ ಸ್ಥಿತಿ ಉದ್ಭವವಾಗಿದೆ. ಯಾಕೆಂದರೆ ಇಲ್ಲಿನ ಬೇಸ್ಮೆಂಟ್ ಜಲಾವೃತಗೊಂಡು ಕೆರೆಯನ್ನು ಹೋಲುತ್ತಿದೆ. ಕಾಡುಬೀಸನಹಳ್ಳಿ ಮತ್ತು ವರ್ತೂರು ನಡುವಿನ ರಸ್ತೆಯಲ್ಲಿ ಮೊಣಕಾಲು ಮುಳುಗುವಷ್ಟು ನೀರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ  

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.