Bengaluru Rains: ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ
ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಕೋಲಾರ: ಮಾನ್ಸೂನ್ ಋತು (monsoon season) ಆರಂಭಗೊಂಡು ಎರಡು ವಾರ ಕಳೆದರೂ ಮುನಿಸಿಕೊಂಡು ಅದೃಶ್ಯನಾಗಿದ್ದ ಮಳೆರಾಯ ಇಂದು ಕೃಪೆ ತೋರಿದ್ದಾನೆ. ಬೆಂಗಳೂರು ನಗರ (Bengaluru City), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ಭಾಗ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivasapura), ಮುಳುಬಾಗಿಲು (Mulbagal) ಹಾಗೂ ಕೋಲಾರ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಹಗುರದಿಂದ ಶುರುವಾದ ಮಳೆ ಜೋರಾಗಿ ಸುರಿದಿದೆ. ಮಳೆಯಿಂದಾಗಿ ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ನಿಜವಾದರೂ ಉಳಿದ ರೈತರು ನಿರಾಳರಾಗಿದ್ದಾರೆ. ಬಿತ್ತನೆ ಕಾರ್ಯ ವಿಳಂಬಗೊಂಡಿದ್ದರಿಂದ ರೈತರಲ್ಲಿ ಆತಂಕ ಮನೆ ಮಾಡಿದ್ದು ಸುಳ್ಳಲ್ಲ. ರಾಜ್ಯದ ಬೇರೆ ಭಾಗಗಳ ರೈತರು ಸಹ ಮಳೆಗಾಗಿ ಎದುರು ನೋಡುತ್ತಿದ್ದಾರೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ