Bengaluru Rains: ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ

Edited By:

Updated on: Jun 20, 2023 | 11:41 AM

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮುಂದಿನ ಮೂರು‌ ದಿನಗಳ ಕಾಲ‌ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಕೋಲಾರ: ಮಾನ್ಸೂನ್ ಋತು (monsoon season) ಆರಂಭಗೊಂಡು ಎರಡು ವಾರ ಕಳೆದರೂ ಮುನಿಸಿಕೊಂಡು ಅದೃಶ್ಯನಾಗಿದ್ದ ಮಳೆರಾಯ ಇಂದು ಕೃಪೆ ತೋರಿದ್ದಾನೆ.  ಬೆಂಗಳೂರು ನಗರ (Bengaluru City), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವು ಭಾಗ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivasapura), ಮುಳುಬಾಗಿಲು (Mulbagal) ಹಾಗೂ ಕೋಲಾರ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಹಗುರದಿಂದ ಶುರುವಾದ ಮಳೆ ಜೋರಾಗಿ ಸುರಿದಿದೆ. ಮಳೆಯಿಂದಾಗಿ ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ನಿಜವಾದರೂ ಉಳಿದ ರೈತರು ನಿರಾಳರಾಗಿದ್ದಾರೆ. ಬಿತ್ತನೆ ಕಾರ್ಯ ವಿಳಂಬಗೊಂಡಿದ್ದರಿಂದ ರೈತರಲ್ಲಿ ಆತಂಕ ಮನೆ ಮಾಡಿದ್ದು ಸುಳ್ಳಲ್ಲ. ರಾಜ್ಯದ ಬೇರೆ ಭಾಗಗಳ ರೈತರು ಸಹ ಮಳೆಗಾಗಿ ಎದುರು ನೋಡುತ್ತಿದ್ದಾರೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮುಂದಿನ ಮೂರು‌ ದಿನಗಳ ಕಾಲ‌ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 20, 2023 11:21 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More