AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟ: ಮತ್ತೆ ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟ: ಮತ್ತೆ ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 23, 2026 | 3:29 PM

Share

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಮುಧೋಳದ ಸಿದ್ದೇಶ್ವರ ಬ್ಯಾರೇಜ್ ಸಂಪೂರ್ಣ ಜಲಾವೃತಗೊಂಡಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಆದರೆ, ಮುಧೋಳ ನಗರದ ಕಲುಷಿತ ನೀರು ನದಿಗೆ ಸೇರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.

ಬೆಳಗಾವಿ/ಬಾಗಲಕೋಟೆ, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇದರಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಗೆ ಒಂದೇ ದಿನದಲ್ಲಿ 10,000 ಕ್ಯೂಸೆಕ್ ನೀರು ಒಳಹರಿವು ಹೆಚ್ಚಳವಾಗಿದ್ದು, ವೇದಗಂಗಾ, ದೂಧಗಂಗಾ ನದಿಗಳಲ್ಲೂ ನೀರಿನ ಮಟ್ಟ ಏರಿದೆ. ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಬಳಿಯ ಘಟಪ್ರಭಾ ನದಿಯ ಸಿದ್ದೇಶ್ವರ ಬ್ಯಾರೇಜ್ ಸಂಪೂರ್ಣ ಜಲಾವೃತಗೊಂಡಿದ್ದು, ಅದರ ಮೇಲೆ ಸುಮಾರು 2 ಅಡಿ ನೀರು ಹರಿಯುತ್ತಿದೆ. ಕೆಲ ದಿನಗಳ ಹಿಂದೆ 250 ಕ್ಯೂಸೆಕ್​ಗೆ ಇಳಿದಿದ್ದ ನದಿಯ ಹರಿವು ಈಗ ಮತ್ತೆ ಜೀವಕಳೆ ಪಡೆದಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಆದರೆ, ಮುಧೋಳ ನಗರದ ಚರಂಡಿ ನೀರು ನದಿಗೆ ಸೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 23, 2026 03:29 PM

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More