ಮೈಸೂರಿನಲ್ಲಿ ಮಳೆಯಿಂದ ಭಾರೀ ಅವಾಂತರ: 2 ಸಾವಿರ ಬಾಳೆ ಗಿಡಗಳು ನಾಶ
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಲಕ್ಷಾಂತರ ರೂಪಾಯಿ ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳೆ ಗಿಡ ನೆಲಕ್ಕುರುಳಿದೆ.
ಮೈಸೂರು, ಜೂನ್.02: ಮೈಸೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಭಾರೀ ಅವಾಂತರಗಳು ಸೃಷ್ಟಿಯಾಗಿವೆ (Mysuru Rain). ಹುಣಸೂರು ತಾಲೂಕಿನ ಹನಗೋಡು ಸುತ್ತಮುತ್ತ ಭಾರಿ ಮಳೆಯಾಗಿದ್ದು ನಾಗಾಪುರ, ಹರಳಹಳ್ಳಿಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮತ್ತಿತರ ಕಡೆ ಬಿರುಗಾಳಿಗೆ ಮರಗಳು ಉರುಳಿವೆ. ನೂರಾರು ಎಕರೆ ಶುಂಠಿ, ತಂಬಾಕು, ಮುಸುಕಿನ ಜೋಳ ಬೆಳೆ ನಾಶವಾಗಿದೆ.
ಇನ್ನು ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳೆ ಗಿಡ ನೆಲಕ್ಕುರುಳಿದೆ. ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಆಗಿದೆ. ನಿನ್ನೆ ಸಂಜೆ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಲಕ್ಷಾಂತರ ರೂಪಾಯಿ ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos