AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ; ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ

Karnataka Rains: ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ; ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ

ಪ್ರಸನ್ನ ಹೆಗಡೆ
|

Updated on: Oct 25, 2026 | 8:55 AM

Share

ಬೆಂಗಳೂರಿನಲ್ಲಿ ನಿನ್ನೆಯಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ವೀಕೆಂಡ್ ಮೂಡ್ ಹಾಳು ಮಾಡಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕುಗೊಂಡಿದೆ. ಬಳ್ಳಾರಿ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಿದೆ. ನೆರೆಯ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಿಂದ ಚೆನ್ನೈ, ತಿರುಚಿರಾಪಳ್ಳಿಯಲ್ಲಿ ಜಲಾವೃತವಾಗಿದೆ. ಊಟಿಯಲ್ಲಿ ಭೂಕುಸಿತ ವರದಿಯಾಗಿದೆ.

ಬೆಂಗಳೂರು, ಅಕ್ಟೋಬರ್​​ 25: ನಗರದಲ್ಲಿ ನಿನ್ನೆ ರಾತ್ರಿಯಿಂದಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಸತತ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಹಿಂಗಾರು ಮಳೆಯ ಆರ್ಭಟ ಚುರುಕುಗೊಂಡಿದ್ದು, ಮೊನ್ನೆಯಿಂದ ಆರಂಭಗೊಂಡ ಮಳೆ ನಿನ್ನೆ ಮಧ್ಯರಾತ್ರಿಯವರೆಗೂ ಮುಂದುವರಿದಿದೆ. ಬೆಂಗಳೂರು ಮಾತ್ರವಲ್ಲದೆ, ಬಳ್ಳಾರಿ, ಚಾಮರಾಜನಗರ ಹಾಗೂ ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ನೆರೆ ರಾಜ್ಯ ತಮಿಳುನಾಡಿನಲ್ಲೂ ಹಿಂಗಾರು ಮಳೆಯ ಅಬ್ಬರ ಹೆಚ್ಚಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ಚೆನ್ನೈ ಸೇರಿದಂತೆ ವಿವಿಧ ನಗರಗಳಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಿರುಚಿರಾಪಳ್ಳಿಯಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಸವಾರರು ತೊಂದರೆ ಅನುಭವಿಸಿದ್ದಾರೆ. ಇದಲ್ಲದೆ, ನೀಲಗಿರಿ ಜಿಲ್ಲೆಯ ಊಟಿ-ಮೆಟ್ಟುಪಾಳಯಂ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸ್ಥಳೀಯ ಜನರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More